ಮಂಗಳೂರು: ಎರಡು ತಿಂಗಳುಗಳ ಹಿಂದೆ ನಡೆದಿರುವ ಬಾಲ್ಯವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಬಾಲಕಿಯನ್ನು ರಕ್ಷಿಸಿ ಇಂದು ಬಾಲ ಮಂದಿರಕ್ಕೆ ಸೇರಿಸಿರುವ ಘಟನೆ ನಡೆದಿದೆ.
ಗುರುವಾರ ಮಧ್ಯಾಹ್ನ 112 ಸಂಖ್ಯೆಗೆ ಕರೆ ಮಾಡಿರುವ ಸಾರ್ವಜನಿಕರೊಬ್ಬರು ನಗರದ ಜೆಪ್ಪು ಕುಡ್ಪಾಡಿಯಲ್ಲಿ ಬಾಲ್ಯ ವಿವಾಹ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿಯೊಂದಿಗೆ ಪೊಲೀಸ್ ಹೊಯ್ಸಳ ವಾಹನದ ಐವರು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಬಾಲಕಿಯನ್ನು ರಕ್ಷಣೆ ಮಾಡಿ ನಗರದ ಬಾಲಮಂದಿರಕ್ಕೆ ಸೇರಿಸಿದ್ದಾರೆ.
Kshetra Samachara
02/09/2021 10:19 pm