ಮಂಗಳೂರು: ಎರಡು ತಂಡಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಚೂರಿ ಇರಿತದಲ್ಲಿ ಅಂತ್ಯ ಕಂಡ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದಿದೆ. ಗೈಲ್ ಸಂಸ್ಥೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿರುವ ಜುನೈದ್, ಚೂರಿ ಇರಿತಕ್ಕೆ ಒಳಗಾದ ಯುವಕ. ಇವರಿಗೆ ಮುಕ್ಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಸುರತ್ಕಲ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದು ಇವರನ್ನು ನಾಸಿರ್ ಯಾನೆ ಮುನ್ನ, ಅನ್ಸಾರ್, ಶಾಹಿಲ್, ಖಲೀಲ್, ನೌಫಲ್, ಖಾದರ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/09/2021 12:02 pm