ಕಾರ್ಕಳ: ಉಪನ್ಯಾಸಕ ಮತ್ತು ಅರ್ಚಕರಾಗಿರುವ ರವಳನಾಥ ಶರ್ಮಾ (32) ಎಂಬವರು ಆತ್ಮಹತ್ಯೆ ಮಾಡಿಕೊಂಡುರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ.
ರವಳನಾಥ ಶರ್ಮಾ ಅವರು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಅರ್ಚಕರಾಗಿ ಮತ್ತು ಈ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂಬಿಎ ಪದವೀಧರರಾಗಿದ್ದ ರವಳನಾಥ, ತಂದೆ, ತಾಯಿ, ತಮ್ಮ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಾರ್ಕಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
13/09/2021 09:16 pm