ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ರಾಪ್ತೆಯ ಅತ್ಯಾಚಾರ ನಡೆಸಿ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಏಳು ವರ್ಷ ಕಠಿಣ ಸಜೆ

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭವತಿಯಾಗಲು ಕಾರಣವಾಗಿದ್ದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೊ) ಏಳು ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ನವೀನ್ (27) ಎಂಬಾತ ತನ್ನದೇ ಗ್ರಾಮದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆಂದು 2019ರ ಜೂ.27ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಅತ್ಯಾಚಾರವೆಸಗಿರುವ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಬಳಿಕ ಆಕೆಗೆ ಗರ್ಭಪಾತವಾಗಿತ್ತು.

ಬೆಳ್ತಂಗಡಿ ಪೊಲೀಸ್ ಠಾಣೆಯ ಅಂದಿನ ಪ್ರೊಬೆಷನರಿ ಡಿವೈಎಸ್ಪಿ, ಗೋವಿಂದ ರಾಜು ಬಿ. ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಾವಿತ್ರಿ ವಿ.ಭಟ್, ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಅತ್ಯಾಚಾರ ಅಪರಾಧಕ್ಕೆ ಏಳು ವರ್ಷ ಕಠಿಣ ಸಜೆ ಮತ್ತು ಐದು ಸಾವಿರ ರೂ. ದಂಡ ಹಾಗೂ ಪೊಕ್ಸೊ ಕಾಯ್ದೆಯಡಿ ಹತ್ತು ವರ್ಷ ಕಠಿಣ ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

15/09/2021 09:50 am

Cinque Terre

15.78 K

Cinque Terre

0

ಸಂಬಂಧಿತ ಸುದ್ದಿ