ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಸರಗೋಡು : ಕೋವಿಡ್ ನಿಯಮ ಉಲ್ಲಂಘನೆ ಅರೋಪ ಹೋಟೆಲ್ ಸಿಬ್ಬಂದಿ, ಗ್ರಾಹಕರ ಮೇಲೆ ಲಾಠಿ ಬೀಸಿದ ಪೊಲೀಸರು...

ಕಾಸರಗೋಡು : ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಹೋಟೆಲ್ ಕಾರ್ಯಚರಿಸುತ್ತಿದೆ ಎಂದು ಆರೋಪಿಸಿ ಪೊಲೀಸರು ಹೋಟೆಲ್ ನೊಳಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಕಾಸರಗೋಡಿನ ಕೋಟಿ ಕುಳಮ್ ಎಂಬಲ್ಲಿ ನಡೆದಿದೆ. ಇದೇ ವೇಳೆ ಹೋಟೆಲ್ ಸಿಬ್ಬಂದಿ ಹಾಗೂ ಗ್ರಾಹಕರ ಮೇಲೆ ಲಾಠಿ ಬೀಸಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಬೇಕಲ ಪೊಲೀಸರು ಏಕಾಏಕಿ ಹೋಟೆಲ್ ಗೆ ನುಗ್ಗಿ ಸಿಬ್ಬಂದಿ ಹಾಗೂ ಗ್ರಾಹಕರ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಹೋಟೆಲ್ ಗೆ ನುಗ್ಗಿ ಲಾಠಿ ಬೀಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದೌರ್ಜನ್ಯದ ವಿರುದ್ಧ ಹೋಟೆಲ್ ರೆಸ್ಟೋರೆಂಟ್ ಮಾಲಕರ ಸಂಘವು ಪ್ರತಿಭಟಿಸಿದ್ದು, ಹೋರಾಟದ ಮುನ್ನೆಚ್ಚರಿಕೆ ನೀಡಿದ್ದಾರೆ. ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

Edited By : Shivu K
Kshetra Samachara

Kshetra Samachara

16/09/2021 05:21 pm

Cinque Terre

14.37 K

Cinque Terre

3

ಸಂಬಂಧಿತ ಸುದ್ದಿ