ಮಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಓರ್ವನನ್ನು ಬಂಧಿಸಿ ಸೊತ್ತು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಜಾಫರ್ ಕಲ್ಲಿಂಗಾಲ್ ಬಂಧಿತ ಆರೋಪಿ. ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕ ಜಾಫರ್ ಕಲ್ಲಿಂಗಾಲ್‌ನನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಈ ಸಂದರ್ಭ ಆರೋಪಿ ಅನುಮಾನ ಬಾರದಂತೆ ಚಿನ್ನವನ್ನು ಪ್ಯಾಕ್‌ಮಾಡಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನದ ಸಹಿತ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 854 ಗ್ರಾಂ ತೂಕದ 41.33 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Kshetra Samachara
16/09/2021 08:27 pm