ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಎನ್‌ಎಂಪಿಟಿ ನಿವೃತ್ತ ಕ್ರೇನ್ ಅಪರೇಟರ್ ಆತ್ಮಹತ್ಯೆ

ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಲೋಟಸ್ ಪಾರ್ಕ್ ನಿವಾಸಿ ಎನ್‌ಎಂಪಿಟಿ ನಿವೃತ್ತ ಕ್ರೇನ್ ಅಪರೇಟರ್ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ಡಿ.ಆರ್ ನಾರಾಯಣ್ (65) ಎಂದು ಗುರುತಿಸಲಾಗಿದೆ. ನಾರಾಯಣ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಬಗ್ಗೆ ಪತ್ರವನ್ನು ಬರೆದಿಟ್ಟು ಬುಧವಾರ ಬೆಳಗ್ಗೆ 10ರಿಂದ ಸಂಜೆ 3ರ ಮಧ್ಯೆ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಇಂಟಕ್ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಪಾಧ್ಯಕ್ಷರಾಗಿದ್ದು, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿದ್ದರು. ಅವರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Edited By : Vijay Kumar
Kshetra Samachara

Kshetra Samachara

16/09/2021 10:25 pm

Cinque Terre

6.82 K

Cinque Terre

1

ಸಂಬಂಧಿತ ಸುದ್ದಿ