ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಲ್ಯಾಡಿ: ತೂಗುಸೇತುವೆಯಲ್ಲಿ ಬ್ಯಾಗ್, ಚಪ್ಪಲ್ ಪತ್ತೆ..ವ್ಯಕ್ತಿ ನದಿಗೆ ಹಾರಿರುವ ಶಂಕೆ..!

ನೆಲ್ಯಾಡಿ: ಉದನೆ ತೂಗುಸೇತುವೆಯಲ್ಲಿ ಪುರುಷರ ಒಂದು ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು ಯಾರೋ ನದಿಗೆ ಹಾರಿರುವ ಶಂಕೆ ವ್ಯಕ್ತಗೊಂಡಿದೆ.

ಬೆಳಿಗ್ಗೆ ಇದನ್ನು ಗಮನಿಸಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್‌ನಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು ಅದರಲ್ಲಿ ರಮಣ, ತಂದೆ ಹೆಸರು: ಸುಬ್ರಹ್ಮಣ್ಯಂ, ಊರು: ಪುಟ್ಟಪರ್ತಿ ಎಂದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ಬರೆದಿದ್ದ ಡೆತ್‌ನೋಟ್ ಸಹ ಪತ್ತೆಯಾಗಿದೆ. ಅಲ್ಲದೇ ಸೆ.15ರಂದು ಧರ್ಮಸ್ಥಳದಿಂದ ಉದನೆಗೆ ಬಸ್ಸಿನಲ್ಲಿ ಪ್ರಯಾಣಿಸಿರುವ ಬಸ್ ಟಿಕೆಟ್ ಸಹ ಪತ್ತೆಯಾಗಿದೆ. ನೆಲ್ಯಾಡಿ ಹೊರಠಾಣೆ ಎಎಸ್‌ಐ ಸೀತಾರಾಮ ಗೌಡರವರು ಸ್ಥಳಕ್ಕೆ ಭೇಟಿ ನೀಡಿ ಬ್ಯಾಗ್ ಪರಿಶೀಲನೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

18/09/2021 12:18 pm

Cinque Terre

9.95 K

Cinque Terre

0

ಸಂಬಂಧಿತ ಸುದ್ದಿ