ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಾನಸಿಕ ಖಿನ್ನತೆ; ಮೂರೇ ದಿನದೊಳಗೆ ಮತ್ತೋರ್ವ ಮಹಿಳೆ ಆತ್ಮಹತ್ಯೆಗೆ ಶರಣು

ಉಡುಪಿ:ಮಾನಸಿಕ ಖಿನ್ನತೆಗೆ ಒಳಗಾಗಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕೊರಂಗ್ರಪಾಡಿಯಲ್ಲಿ ನಡೆದಿದೆ.ಚಂದ್ರಕಲಾ(45) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಮಾನಸಿಕ‌ ಖಿನ್ನತೆಗೆ ಒಳಗಾಗಿದ್ದ ಇವರು ವಿಷ್ಣುಮೂರ್ತಿ ದೇವಸ್ಥಾನದ ಹತ್ತಿರ ಕೊರಂಗ್ರಪಾಡಿಯ ಮನೆ ಹತ್ತಿರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಗರ ಪೋಲಿಸ್ ಠಾಣೆಯ ಎಸ್.ಐ. ವಾಸಪ್ಪ ನಾಯ್ಕ್, ವಿಜಯ ಸಿ., ವಿಶ್ವನಾಥ್ ಶೆಟ್ಟಿ ಆಗಮಿಸಿ ಅಗತ್ಯ ಪ್ರಕ್ರಿಯೆ ನಡೆಸಿದರು.ಮೂರು ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತೆಯೊಬ್ಬರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಆ್ಯಂಬುಲೆನ್ಸ್ ಸೇವೆಯನ್ನು ಒದಗಿಸಿದ್ದು,ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಯಿತು.

Edited By : Manjunath H D
Kshetra Samachara

Kshetra Samachara

18/09/2021 09:53 pm

Cinque Terre

15 K

Cinque Terre

0