ಮಂಗಳೂರು: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ, ಕುಳಾಯಿ ನಿವಾಸಿ ರಾಜೇಶ್ ಪವಿತ್ರನ್ (40), ಅಡ್ಕಾರು ನಿವಾಸಿ ಸಂದೀಪ್ ಗಣೇಶ್ ಶೆಟ್ಟಿ (40), ಬಂಟ್ವಾಳದ ಕರಿಯಂಗಳ ನಿವಾಸಿ ಪ್ರೇಮ್ ರಾಜೇಶ್ ಶೆಟ್ಟಿ (48) ಬಂಧಿತ ಆರೋಪಿಗಳು. ಈಗಾಗಲೇ ಉರ್ವ ನಿವಾಸಿ, ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ (53) ನನ್ನು ನಿನ್ನೆಯೇ ಬಂಧಿಸಲಾಗಿತ್ತು.
ವಿವಾದಾತ್ಮಕ ಹೇಳಿಕೆ ನೀಡಿರುವ ಧರ್ಮೇಂದ್ರನ ಬಂಧನ ನಿನ್ನೆಯೇ ಆಗಿತ್ತು. ಆದರೆ ಉಳಿದ ಮೂವರನ್ನು ಪೊಲೀಸರು ಕೇವಲ ವಶಕ್ಕೆ ಪಡೆದಿದ್ದರು. ಆದರೆ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಇಂದು ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನು ನಾಲ್ವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ಇನ್ನಷ್ಟೇ ಬಂಧನವಾಗಬೇಕಿದೆ. ಉಳಿದ ಆರೋಪಿಗಳಾದ ಕಮಲಾಕ್ಷ ಪಡೀಲ್, ಸುಧಾಕರ್ ಶೆಟ್ಟಿ, ಪ್ರವೀಣ್ ಶೆಟ್ಟಿ, ಉಲ್ಲಾಸ್ ಎಂಬವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Kshetra Samachara
20/09/2021 08:43 pm