ಕಾರ್ಕಳ: ಕಾರ್ಕಳ ಎಸ್‌ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾರ್ಕಳ ತಾಲೂಕಿನ ಪೆರ್ವಾಜೆ ನಿವಾಸಿ ಮಮತಾ ಶೆಟ್ಟಿ ಆತ್ಮಹತ್ಯೆಗೆ ಶರಣಾದವರು. ಮಮತಾ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಈ ನಿರ್ಧಾರಕ್ಕೆ ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ. ಶಿಕ್ಷಕಿ ಮಮತಾ ಪತಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಘಟನೆ ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
20/09/2021 09:27 pm