ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 19.89 ಲಕ್ಷ ರೂ. ಚಿನ್ನ ವಶಕ್ಕೆ

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19.89 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದ್ದು, ಓರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡಿನ ಪ್ರಯಾಣಿಕನನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ‌. ಈ ಸಂದರ್ಭದಲ್ಲಿ ಆರೋಪಿ ದೇಹದೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ 418 ಗ್ರಾಂ ತೂಕದ ರೂ.19,89,680 ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ‌. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳೆದ 3 ದಿನಗಳ ಅಂತರದಲ್ಲಿ ತೆರಿಗೆ ವಂಚಿಸಿ ಚಿನ್ನ ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

20/09/2021 11:03 pm

Cinque Terre

12.1 K

Cinque Terre

0

ಸಂಬಂಧಿತ ಸುದ್ದಿ