ಮಂಗಳೂರು: ವ್ಯಕ್ತಿಯೋರ್ವ ನಗರದ ಕೊಡಿಯಾಲ್ ಬೈಲ್ನಲ್ಲಿರುವ ಡಯಟ್ ಶಿಕ್ಷಣ ಸಂಸ್ಥೆಗೆ ನಿನ್ನೆ ನುಗ್ಗಿ ಶಿಕ್ಷಕಿ ಸೇರಿ ಮೂವರು ಸಿಬ್ಬಂದಿ ಮೇಲೆ ತಲವಾರಿನಿಂದ ದಾಳಿ ನಡೆಸಿದ್ದ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಆರೋಪಿ ನವೀನ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಹಲ್ಲೆಗೆ ವಿಚಿತ್ರ ಕಾರಣವೊಂದು ಬೆಳಕಿಗೆ ಬಂದಿದೆ.
ಈ ಸಂಬಂಧ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್, 'ತನಗೆ ಶಿಕ್ಷಕಿಯೋರ್ವರು ಮಾಟ-ಮಂತ್ರ ಮಾಡಿದ್ದಾರೆಂದು ಆರೋಪಿ ನವೀನ್ ಗ್ರಹಿಸಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆಗೆ ಮಾಡಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಲ್ಲದೆ ಈತ ಮಾನಸಿಕ ರೋಗದಿಂದ ಬಳಲುತ್ತಿದ್ದಾನೆ' ಎಂದು ತಿಳಿಸಿದ್ದಾರೆ.
Kshetra Samachara
21/09/2021 11:06 am