ಮಂಗಳೂರು: ಬಟ್ಟೆಯ ಒಳಗಡೆ ಮರೆಮಾಡಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 13.88 ಲಕ್ಷ ರೂ. ಚಿನ್ನ ವಶಪಡಿಸಿಕೊಂಡಿದ್ದಾರೆ.
ಕೇರಳ, ಕಾಸರಗೋಡು ಮೂಲದ ಪ್ರಯಾಣಿಕ ಇಂದು ಮಧ್ಯಾಹ್ನ ದುಬೈನಿಂದ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದ್ದು, ಆತ ಬಟ್ಟೆಯೊಳಗಡೆ ಮರೆಮಾಡಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಆರೋಪಿಯನ್ನು ಬಂಧಿಸಿರುವ ಪೊಲೀಸರು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 293.620 ಗ್ರಾಂ (24 ಕ್ಯಾರೆಟ್ ಶುದ್ಧ ಚಿನ್ನ) ತೂಕದ 13,88,823 ರೂ. ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Kshetra Samachara
21/09/2021 04:15 pm