ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಿವಾಲ್ವರ್ ತೋರಿಸಿ ಮೊಬೈಲ್ ಶಾಪ್ ಮಾಲೀಕನ ಕಿಡ್ನಾಪ್: 4.64 ಲಕ್ಷ ಸುಲಿಗೆ!

ಕುಂದಾಪುರ: ನಗರದಲ್ಲಿ ಮೊಬೈಲ್ ಶಾಪ್ ಮಾಲೀಕನನ್ನು ಅಪಹರಿಸಿದ ತಂಡವೊಂದು ಲಕ್ಷಾಂತರ ರೂ.ನಗದು ಹಾಗೂ ದಾಖಲೆಗಳನ್ನು ಸುಲಿಗೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಮೊಬೈಲ್ ಅಂಗಡಿ ಮಾಲೀಕ ಮುಸ್ತಫಾ( 34 ) ಸುಲಿಗೆಗೊಳಗಾದ ವ್ಯಕ್ತಿ.

ಇವರು ಕುಂದಾಪುರ ಚಿಕನ್ ಸಾಲ್ ತಿರುವಿನಲ್ಲಿರುವ ವಾಣಿಜ್ಯ ಕಾಂಪ್ಲೆಕ್ಸ್ ಒಂದರಲ್ಲಿ ಮೊಬೈಲ್ x ಹೆಸರಿನ ಶೋ ರೂಮ್ ನಡೆಸುತ್ತಿದ್ದಾರೆ. ತನ್ನನ್ನು ಮುಕ್ತಾರ್ ಹಾಗೂ ಇತರ ಐವರು ಅಪಹರಣ ಮಾಡಿ 4 ಲಕ್ಷದ 64 ಸಾವಿರದ ನೂರ ಎಪ್ಪತ್ತೈದು ರೂಪಾಯಿ ಹಣ ಹಾಗೂ 1 ಲಕ್ಷ ಮೌಲ್ಯದ ಸೊತ್ತುಗಳು ಮತ್ತು ಅಮೂಲ್ಯ ದಾಖಲೆಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಮುಸ್ತಾಫಾ ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೆ.17 ರಂದು ರಾತ್ರಿ 9.30ಕ್ಕೆ ತಾನು ಅಂಗಡಿ ವ್ಯವಹಾರ ಮುಗಿಸಿ ವ್ಯವಹಾರದ ಹಣ 50 ಸಾವಿರ ನಗದು, ಆಧಾರ್ ಕಾರ್ಡ್ , ಪಾನ್ ಕಾರ್ಡ್ 3-4 ಬ್ಯಾಂಕ್‌ಗಳ ಚೆಕ್ ಪುಸ್ತಕಗಳು ಹಾಗೂ ಇನ್ನಿತರ ಅಮೂಲ್ಯ ದಾಖಲೆ ಹಾಗೂ ಐಫೋನ್ -1, ಸ್ಯಾಮಸಂಗ್ ಮೊಬೈಲ್ ಫೋನ್ 1, ಆಪಲ್ ಸ್ಮಾರ್ಟ್ ವಾಚ್ -1 ಹಾಗೂ ಏರ್ ಪೋಡ್-1 ಇವುಗಳನ್ನು ಬ್ಯಾಗಿನಲ್ಲಿ ಹಾಕಿಕೊಂಡು ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿಕೊಂಡು ಹೋಗುತ್ತಿದ್ದೆ. ಆ ಸಮಯದಲ್ಲಿ ಒಂದು ಸ್ವಿಪ್ಟ್ ಕಾರು ಅಡ್ಡಲಾಗಿ ಬಂದು ನಿಂತಿದ್ದು, ಅದರ ಚಾಲಕನ ಸೀಟಿನಲ್ಲಿ ಮುಖ್ತಾರ್ ಎಂಬ ಪರಿಚಿತ ಕುಳಿತು ಕೊಂಡಿದ್ದ. ಬಳಿಕ ಅಪರಿಚಿತ ವ್ಯಕ್ತಿಯೋರ್ವ ಕಾರಿನಿಂದ ಇಳಿದು ದೈಹಿಕ ಹಲ್ಲೆ ಮಾಡಿ ಕಾರಿನ ಒಳಗೆ ಎಳೆದುಕೊಂಡಿದ್ದು ಕಾರಿನಲ್ಲಿದ್ದ ಇನ್ನೊರ್ವ ಅಪರಿಚಿತ ವ್ಯಕ್ತಿ ಕೈಯಲ್ಲಿದ್ದ ರಿಲಾಲ್ವರ್‌ ಅನ್ನು ತೋರಿಸಿ ಬೆದರಿಸಿದ್ದಾನೆ.

ಓರ್ವ ಆರೋಪಿಯು ಹಲ್ಲೆ ನಡೆಸಿ ಕೈಯನ್ನು ಹಾಗೂ ಬಾಯಿಯನ್ನು ಕಟ್ಟಿ ಕೂಗದಂತೆ ಮಾಡಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಕಾರಿನಲ್ಲಿ ತೆರಳುವ ಮಾರ್ಗ ಮದ್ಯೆ ಓರ್ವ ಮಹಿಳೆ ಕಾರು ಏರಿದ್ದು ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಮತ್ತಿಬ್ಬರು ಅಪರಿಚಿತ ಆರೋಪಿಗಳು ಇವರಿಗೆ ಜೊತೆಯಾಗಿದ್ದಾರೆ.

ಬೆಂಗಳೂರಿನ ಲಾಡ್ಜನ್ನು ಸೇರಿದ ಮೇಲೆ ಜತೆಗಿದ್ದ ಮಹಿಳೆ ನನ್ನ ಮನೆಯವರಿಗೆ ಕರೆ ಮಾಡಿಸಿ‌ ಅವರಿಂದ ತಲಾ ಒಂದೊಂದು‌ ಲಕ್ಷ ನನ್ನ ಖಾತೆಗೆ ಹಾಕಿಸಿಕೊಂಡಿದ್ದು, ಮೊಬೈಲ್‌ ಮೂಲಕ ಬ್ಯಾಂಕ್ ಖಾತೆಯನ್ನು ಓಪನ್ ಮಾಡಿ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದಾಳೆ. ಕುಂದಾಫುರದಿಂದ ಬೆಂಗಳೂರಿಗೆ ಹೋಗುವಾಗ ದಾರಿಮಧ್ಯೆಯಲ್ಲಿ ಬೆಂಗಳೂರಿನ ಎಟಿಎಮ್‌ ಹಾಗೂ ಸ್ವೈಪಿಂಗ್ ಮೆಷಿನ್‌ ನಿಂದ ರೂಪಾಯಿ 3,14,175 /- ರೂಪಾಯಿಯನ್ನು ಡ್ರಾ ಮಾಡಿದ್ದಾರೆ.

ಇನ್ನು ಎಕ್ಸಿಸ್ ಬ್ಯಾಂಕ್‌ನ ಚೆಕ್ ಪುಸ್ತಕವನ್ನು ತೆಗೆದುಕೊಂಡು ಸಹಿ ಮಾಡಲು ಹೇಳಿ ನೀನು ಊರಿಗೆ ಹೋದ ಮೇಲೆ ಖಾತೆಗೆ ಹಣ ಜಮಾ ಮಾಡಬೇಕು, ಜಮಾ ಮಾಡಿದರೆ ಮಾತ್ರ ದಾಖಲಾತಿಯನ್ನು ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಹಿಂತಿರುಗಿಸುವುದಾಗಿ ಹೇಳಿದ್ದಾರೆ. ಒಟ್ಟು 4,64,175 ರೂ. ಹಣವನ್ನು ಹಾಗೂ 1 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಸುಲಿಗೆ ಮಾಡಿದ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Edited By : Nirmala Aralikatti
Kshetra Samachara

Kshetra Samachara

22/09/2021 07:15 pm

Cinque Terre

14.4 K

Cinque Terre

3

ಸಂಬಂಧಿತ ಸುದ್ದಿ