ಸುಳ್ಯ: ಚಿಕ್ಕಮಗಳೂರು ಅರಣ್ಯ ಸಂಚಾರಿ ಪೊಲೀಸ್ ದಳ ಮತ್ತು ವಲಯ ಅರಣ್ಯ ಇಲಾಖೆ ಪಂಜ ಇವರ ಜಂಟಿ ಕಾರ್ಯಾಚರಣೆಯಲ್ಲಿ ಸುಳ್ಯ ತಾಲೂಕಿನ ಬಾಳಿಲದ ಮನೆಯೊಂದರ ಕೊಟ್ಟಿಗೆಯಲ್ಲಿ ರಕ್ತಚಂದನ ಪತ್ತೆಯಾಗಿದೆ.
ಪೊಲೀಸ್ ಅರಣ್ಯ ಸಂಚಾರಿ ದಳ ಘಟಕಕ್ಕೆ ದೊರೆತ ಮಾಹಿತಿ ಮೇರೆಗೆ ಸೆ.22 ರಂದು ಮುಂಜಾನೆ ಬಾಳಿಲದ ಅಬ್ದುಲ್ ಎಂಬವರ ಮನೆಗೆ ಜಂಟಿ ಇಲಾಖೆಗಳ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯ ಕೊಟ್ಟಿಗೆಯಲ್ಲಿ 260 ಕೆ.ಜಿ. (40 ತುಂಡು) ರಕ್ತ ಚಂದನ ಪತ್ತೆಯಾಗಿದ್ದು, ಇಲಾಖೆಯವರು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬಾಳಿಲ ಗ್ರಾಮದ ನಿವಾಸಿ ಅಬ್ದುಲ್ ಮತ್ತು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಟ್ಟತ್ತಾರು ನಿವಾಸಿ ಕೆ ಹಮೀದ್ ಎಂಬವರನ್ನು ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಾಗಿದೆ. ಅವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನಿನ ಮೇಲೆ ಬಿಡುಗಡೆ ಗೊಂಡಿದ್ದಾರೆ.
Kshetra Samachara
23/09/2021 11:34 am