ಬಂಟ್ವಾಳ: ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದ ಕೆದುಮೂಲೆ ಎಂಬಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಶೀಲಾವತಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ತಾನು ಮತ್ತು ಮಕ್ಕಳು ಮನೆಯ ಹತ್ತಿರವಿರುವ ನೀರಿನ ಕಣಿವೆಯಲ್ಲಿದ್ದ ಸಂದರ್ಭ, ಮಾವ ದೆಯ್ಯು ಪಂಡಿತ್ ಎಂಬವರು ದೊಣ್ಣೆಯಿಂದ ಹೊಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾಗಿ ದೂರು ನೀಡಲಾಗಿದೆ. ಗಾಯಾಳು ಕಾಸರಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ವಿಟ್ಲ ಠಾಣೆಗೆ ದೂರು ನೀಡಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
25/09/2021 09:26 am