ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೇಲಾಧಿಕಾರಿಗಳ ಕಿರುಕುಳ ಆರೋಪ, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ

ಮಂಗಳೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ನೊಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ವಿಭಾಗ ಮೂರನೇ ಘಟಕದ ಚಾಲಕ ಕಂ ನಿರ್ವಾಹಕ ನಿಂಗಪ್ಪ ನೇಣು ಹಾಕಿಕೊಂಡ ದುರ್ದೈವಿ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಾಮವಡಗಿ ಗ್ರಾಮದ ನಿಂಗಪ್ಪ ಕುಂಟಿಕಾನ ಬಳಿಯ ಬಾಡಿಗೆ ‌ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮೇಲಾಧಿಕಾರಿ ಕಿರುಕುಳ ಕಾರಣ ಅಂತ ಮನೆಯವರು ಆರೋಪಿಸಿದ್ದು.ಬಸ್ ತೆಗೆಯುವ ವಿಚಾರದಲ್ಲಿ ನಿರ್ಲಕ್ಷ್ಯ ಆರೋಪಿಸಿ ನಿಂಗಪ್ಪ ಅಮಾನತುಗೊಂಡಿದ್ದ.

ಅಮಾನತಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಕೆಎಸ್‌ಆರ್‌ಟಿಸಿ ನಂದಕುಮಾರ್, ಡಿಟಿಓ ಕಮಲಾಕರ್ ಹಾಗೂ ಕೆಸ್ಸಾರ್ಟಿಸಿ ಡಿಸಿ ಅರುಣ್ ಕುಮಾರ್ ವಿರುದ್ದ ಆರೋಪ ಕೇಳಿಬಂದಿದೆ.ಈ ಮೂವರ ಕಿರುಕುಳಕ್ಕೆ ನೊಂದು ನಿಂಗಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಮೂವರು ಕೆಎಸ್‌ಆರ್‌ಟಿಸಿ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಮನೆಯವರು ಒತ್ತಾಯಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

27/09/2021 04:04 pm

Cinque Terre

14.57 K

Cinque Terre

1

ಸಂಬಂಧಿತ ಸುದ್ದಿ