ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹೆದ್ದಾರಿಯಲ್ಲಿ ನೈತಿಕ ಪೊಲೀಸ್‌ಗಿರಿ: ಸ್ಥಳದಲ್ಲೇ ಇದ್ದರೂ ಅಸಹಾಯಕರಾದ ಇನ್ಸ್ಪೆಕ್ಟರ್

ಮಂಗಳೂರು: ಮಂಗಳೂರಿನ ಸುರತ್ಕಲ್ ಹೆದ್ದಾರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ನಡೆದಿರುವುದು ಬೆಳಕಿಗೆ ಬಂದಿದೆ.‌ ಭಾನುವಾರ ಸಂಜೆ ಮಲ್ಪೆ ಬೀಚ್ ಗೆ ತೆರಳಿ ವಾಪಸಾಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ಗುಂಪು ಮುಗಿಬಿದ್ದಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾಗಿದೆ.

ಬೊಲೆರೋ ವಾಹನದಲ್ಲಿ ದೇರಳಕಟ್ಟೆಯ ಖಾಸಗಿ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಯುವಕ- ಯುವತಿಯರು ಮಲ್ಪೆ ಬೀಚ್ ಗೆ ತೆರಳಿ ಮಂಗಳೂರಿನತ್ತ ಬರುತ್ತಿದ್ದರು. ಈ ವೇಳೆ ಯುವಕರ ಗುಂಪು ಅಡ್ಡಗಟ್ಟಿದ್ದು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಲು ಮುಂದಾಗಿದೆ. ಈ ವೇಳೆ, ಸಿವಿಲ್ ಡ್ರೆಸ್ ನಲ್ಲಿದ್ದ ಮಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಯುವಕರನ್ನು ತಡೆದಿದ್ದು ಹೊಡೆಯಬೇಡಿ ಎನ್ನುತ್ತಾ ಯುವಕರನ್ನು ಅಂಗಲಾಚಿದ್ದಾರೆ. ಆದರೆ ಯುವಕರು ಪೊಲೀಸ್ ಅಧಿಕಾರಿಯ ಮಾತು ಕೇಳದೆ ಬೊಲೆರೋ ವಾಹನಕ್ಕೆ ಕೈ ತುರುಕಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದರ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಭಾರೀ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಸುರತ್ಕಲ್ ಪೊಲೀಸರು ಐವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Edited By : Shivu K
Kshetra Samachara

Kshetra Samachara

28/09/2021 10:56 am

Cinque Terre

23.24 K

Cinque Terre

0

ಸಂಬಂಧಿತ ಸುದ್ದಿ