ಗಂಗೊಳ್ಳಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿ ಪೋಲಿಸರು ಮಿಂಚಿನ ಕಾರ್ಯಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಮೋಟಾರು ಸೈಕಲ್ ಕಳ್ಳರನ್ನು ಬಂಧಿಸಿದ್ದಾರೆ. ಗದಗ ಮೂಲದ ಪ್ರಕ್ಕುದ್ದೀನ್ ( 22 ) ಮತ್ತು ಕಿರಣ ಶರಣಪ್ಪ ಕುಂಬಾರ ( 19 ) ಬಂಧಿತ ಆರೋಪಿಗಳಾಗಿದ್ದಾರೆ.ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳವುಗೈದ
ಆರೋಪಿಗಳಿಂದ 2,75,000 ರೂ ಮೌಲ್ಯದ 5 ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.ಉಡುಪಿ ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಈ ಕಾರ್ಯಚರಣೆ ನಡೆದಿದ್ದು,ವೃತ್ತನೀರಿಕ್ಷಕ ಸಂತೋಷ್ ಕಾಯ್ಕಿಣಿ, ಪಿ.ಎಸ್.ಐ ನಂಜನಾಯ್ಕ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
02/10/2021 01:59 pm