ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ, ಸುಗಂಧ ದ್ರವ್ಯ ಅಕ್ರಮ ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಮೂಲ್ಯ ಸೊತ್ತುಗಳನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತರರಾಷ್ಟ್ರೀಯ ವಿಮಾ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.

ಭಟ್ಕಳದ ವ್ಯಕ್ತಿಯೋರ್ವ ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ. ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಪರಿಶೀಲನೆ ನಡೆಸಿದಾಗ ಆತ ಚಿನ್ನ ಸಹಿತ ಸುಗಂಧ ದ್ರವ್ಯಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಆರೋಪಿ ಸಹಿತ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯಿಂದ 24 ಕ್ಯಾರೆಟ್ ಪರಿಶುದ್ಧತೆಯ 201.200 ಗ್ರಾಂ ತೂಕದ 9,57,712 ರೂ. ಮೌಲ್ಯದ ಚಿನ್ನದ ಬಿಲ್ಲೆಗಳು, 24 ಗ್ರಾಂ ತೂಕದ 1,04,640 ರೂ. ಮೌಲ್ಯದ ಚಿನ್ನದ ನಾಣ್ಯಗಳು, 1,02,600 ರೂ. ಮೌಲ್ಯದ ಆ್ಯಪಲ್ ಐಪೋನ್, 1,69,500 ರೂ. ಮೌಲ್ಯದ ಸುಗಂಧ ದ್ರವ್ಯದ 12 ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

03/10/2021 11:05 pm

Cinque Terre

19.21 K

Cinque Terre

0

ಸಂಬಂಧಿತ ಸುದ್ದಿ