ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ ಕೇಸ್ : ಠಾಣೆಗೆ ನುಗ್ಗಿದ ಶಾಸಕ

ಮಂಗಳೂರು:ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳ ಪರವಾಗಿ ಬ್ಯಾಟಿಂಗ್ ಮಾಡಿದ ಮೂಲ್ಕಿ ಮೂಡಬಿದ್ರೆ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ರಾತ್ರೋರಾತ್ರಿ ಠಾಣೆ ನುಗ್ಗಿ ಆರೋಪಿಗಳನ್ನು ಕರೆತಂದಿದ್ದೇಕೆ ಎಂದು ಬಹಿರಂಗವಾಗಿ ಪ್ರಶ್ನೆ ಹಾಕಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ "ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ರಾತ್ರೋರಾತ್ರಿ ಠಾಣೆ ನುಗ್ಗಿ ಮೂಡುಬಿದಿರೆ ಅನೈತಿಕ ಪೊಲೀಸ್‌ಗಿರಿ ಘಟನೆಯ ಆರೋಪಿಗಳನ್ನು ಕರೆತಂದಿದ್ದೇಕೆ? ಮಹಿಳೆಯರ ಮೇಲೆ ದೌರ್ಜನ್ಯ ಎಸಗುವುದು, ಎಸಗಿದವರ ರಕ್ಷಣೆಗೆ ನಿಲ್ಲುವ ಬಿಜೆಪಿಯ ಹಳೆಯ ಚಾಳಿ. ಕಾನೂನು ಸುವ್ಯವಸ್ಥೆಯ ಕುಸಿತಕ್ಕೆ ಹಾಗೂ ಬಿಜೆಪಿ ಶಾಸಕರ ಈ ವರ್ತನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉತ್ತರಿಸಬೇಕು" ಎಂದುಟ್ವೀಟ್ ನಲ್ಲಿ ಆಗ್ರಹಿಸಿದೆ.

ಮೊನ್ನೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಅನೈತಿಕ ಪೊಲೀಸ್ ಗಿರಿ ನಡೆಸಿ ನಿಂದಿಸಿದ್ದ ಆರೋಪಿಗಳಾದ ಸಂಹಿತರಾಜ್ ಮತ್ತು ಸಂದೀಪ್ ಪೂಜಾರಿ ಎಂಬುವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

11/10/2021 12:18 pm

Cinque Terre

16.93 K

Cinque Terre

9

ಸಂಬಂಧಿತ ಸುದ್ದಿ