ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಚಿನ್ನ ಸಾಗಾಟ : ಓರ್ವ ವಶಕ್ಕೆ

ಮಂಗಳೂರು: ಮಂಗಳೂರು ಏರ್ಪೋರ್ಟ್ ನಲ್ಲಿ ಲಕ್ಷಾಂತರ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಆಗಮಿಸಿರುವ ಕೇರಳದ ಕಾಸರಗೋಡು ಮೂಲದ ಆರೋಪಿಯು ಮಂಗಳವಾರ ನಸುಕಿನ ಜಾವ 2 ಗಂಟೆ‌ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿದ್ದಾರೆ. ಆಗ ಆತನಲ್ಲಿ ದ್ರವರೂಪದಲ್ಲಿದ್ದ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ಪತ್ತೆಯಾಗಿದೆ.

ದ್ರವ ರೂಪದಲ್ಲಿದ್ದ ಚಿನ್ನವನ್ನು ಗಮ್‌ನೊಂದಿಗೆ ಮಿಶ್ರಣ ಮಾಡಿ, ಕಂದು ಬಣ್ಣದ ಶೀಟ್‌ವೊಂದರಲ್ಲಿ ಅಡಗಿಸಿಟ್ಟಿದ್ದ. ಇದನ್ನು ಟ್ರಾಲಿಯ ಕೆಳಭಾಗದ ಎರಡು ಪದರುಗಳ ಅಡಿಯಲ್ಲಿರಿಸಿ, ಸಾಗಾಟ‌ಮಾಡಲು ಯತ್ನಿಸಿದ್ದ ಎಂದು ತಿಳಿದುಬಂದಿದೆ. ತಕ್ಷಣ ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

12/10/2021 11:30 am

Cinque Terre

24.2 K

Cinque Terre

2

ಸಂಬಂಧಿತ ಸುದ್ದಿ