ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾನಸಿಕ ಖಿನ್ನತೆ: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾದ ಕಾಲೇಜು ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ ನಡೆದಿದೆ. ಶಬರೀಶ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕಾರ್ಕಳದ ಎಂಪಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ಶಬರೀಶ್, ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

12/10/2021 06:04 pm

Cinque Terre

27.37 K

Cinque Terre

2