ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರಗೈದು ಮಗು ನೀಡಿದ ವ್ಯಕ್ತಿಗೆ 12 ವರ್ಷ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರಗೈದು ಮಗು ಕರುಣಿಸಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯ 12 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.

ಮೂಲತಃ ಗದಗ ಜಿಲ್ಲೆಯ ಸದ್ಯ ನಗರದ ಕಾವೂರು ನಿವಾಸಿ ಕೂಲಿ ಕಾರ್ಮಿಕ ಮಲ್ಲಿಕಾರ್ಜುನ ಹನುಮಂತಪ್ಪ (27) ಶಿಕ್ಷೆಗೊಳಗಾದ ಅಪರಾಧಿ. ಮಲ್ಲಿಕಾರ್ಜುನ‌‌ ಹಾಗೂ ಸಂತ್ರಸ್ತ ಬಾಲಕಿಯ ತಂದೆ ಸ್ನೇಹಿತರಾಗಿದ್ದರು. ಈ ರೀತಿ ಪರಿಚಿತನಾಗಿದ್ದ ಆರೋಪಿ ಬಾಲಕಿಯನಯ ಮದುವೆಯಾಗುವುದಾಗಿ ನಂಬಿಸಿ 2017ರ ಮೇ ತಿಂಗಳಿನಲ್ಲಿ ಅಪಹರಿಸಿದ್ದ. ಸಂತ್ರಸ್ತೆಯನ್ನು ಗೋವಾಕ್ಕೆ ಕರೆದೊಯ್ದ ಆರೋಪಿ, ಆಕೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ. ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದು, ಬಳಿಕ ಗೋವಾದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಈ ಸಂದರ್ಭ ಆತ ಬಾಲಕಿ ಹಾಗೂ ಮಗುವನ್ನು ಬಿಟ್ಟು ಪರಾರಿಯಾಗಿದ್ದಾನೆ. ಬಾಲಕಿಯ ಹೆತ್ತವರಿಗೆ ಈ ವಿಚಾರ ತಿಳಿದು ಬಂದು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಆರೋಪಿಯ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ಅತ್ಯಾಚಾರ ಪ್ರಕರಣಕ್ಕೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 25 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ ಮತ್ತೆ 4 ತಿಂಗಳು ಸಜೆ, ಅಪಹರಣ ನಡೆಸಿರುವುದಕ್ಕೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದರೆ 2 ತಿಂಗಳು ಮತ್ತೆ ಸಜೆ, ವಂಚಿಸಿರುವುದಕ್ಕೆ 6 ತಿಂಗಳು ಕಠಿಣ ಸಜೆ ಮತ್ತು 5,000 ರೂ. ದಂಡ, ದಂಡ ತೆರಲು ತಪ್ಪಿದರೆ ಹೆಚ್ಚುವರಿ 15 ದಿನಗಳ ಸಜೆ ಹಾಗೂ ಪೊಕ್ಸೊ ಕಾಯ್ದೆಯಡಿ 12 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.‌ ಅಲ್ಲದೆ, ಸರಕಾರ 2.50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

14/10/2021 01:18 am

Cinque Terre

24.46 K

Cinque Terre

2

ಸಂಬಂಧಿತ ಸುದ್ದಿ