ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಚೇರಿ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್

ಮಂಗಳೂರು: ಕಚೇರಿ ಸಿಬ್ಬಂದಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ದ.ಕ.ಜಿಲ್ಲಾ ವ್ಯವಸ್ಥಾಪಕನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ದ.ಕ. ಜಿಲ್ಲಾ ವ್ಯವಸ್ಥಾಪಕ‌ ಮುಹಮ್ಮದ್ ಫಾರೂಕ್ (47) ಬಂಧಿತ ಆರೋಪಿ.

ನಗರದಲ್ಲಿರುವ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ದ.ಕ.ಜಿಲ್ಲಾ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಯುವತಿಯೋರ್ವಳು ಕರ್ತವ್ಯ ನಿರ್ವಹಿಸುತ್ತಿದ್ದಳು. ಈಕೆಗೆ ಆರೋಪಿ‌ ಮಹಮ್ಮದ್ ಫಾರೂಕ್ ಲೈಂಗಿಕ ‌ಕಿರುಕುಳ ನೀಡುತ್ತಿರುವುದಾಗಿ ದೂರು ನೀಡಲಾಗಿತ್ತು.‌ ಯುವತಿ ನೀಡಿರುವ ದೂರಿನ ಆಧಾರದಲ್ಲಿ ಆರೋಪಿಯನ್ನು ನಿನ್ನೆ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

14/10/2021 01:25 pm

Cinque Terre

9.72 K

Cinque Terre

2

ಸಂಬಂಧಿತ ಸುದ್ದಿ