ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬಹುಮಹಡಿ ಕಟ್ಟಡದ ಅಕ್ರಮ ಕಾಮಗಾರಿ ನಿಲ್ಲಿಸಲು ಸೂಚನೆ

ಮುಲ್ಕಿ: ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕ್ಷೀರ ಸಾಗರ ಟಯರ್ ಅಂಗಡಿ ಬಳಿ ಅಕ್ರಮ ರೀತಿಯಲ್ಲಿ ಬಹುಮಹಡಿ ಕಟ್ಟಡದ ಕಾಮಗಾರಿ ನಡೆಯುತ್ತಿರುವ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿಯಾಗುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಪೂಜಾರಿ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ತಾಕೀತು ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಕ್ಷೀರಸಾಗರದ ಬಳಿಯ ಒಳರಸ್ತೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಸುರತ್ಕಲ್ ಮೂಲದ ಗುತ್ತಿಗೆದಾರರೊಬ್ಬರು ಅವೈಜ್ಞಾನಿಕ ರೀತಿಯಲ್ಲಿ ಬಹುಮಹಡಿ ಕಟ್ಟಡ ಕಾಮಗಾರಿ ನಡೆಸುತ್ತಿದ್ದು ಸೆಟ್ ಬ್ಯಾಕ್ ಬಿಡದೆ ಕಾಮಗಾರಿ ನಡೆಸುತ್ತಿದ್ದಾರೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಲಿದೆ. ಕಟ್ಟಡ ಕಾಮಗಾರಿಯಿಂದ ರಸ್ತೆ ಹೊಂಡಮಯ ವಾಗಿದ್ದು ಸಂಚರಿಸಲು ಅಸಾಧ್ಯವಾಗಿದೆ.

ಭಾರಿ ಗಾತ್ರದ ವಾಹನಗಳು ಸಂಚರಿಸಿ ರಸ್ತೆ ಅವ್ಯವಸ್ಥೆಯ ಆಗರವಾಗಿದ್ದು ಅನೇಕ ಅಪಘಾತಗಳು ಸಂಭವಿಸಿದೆ ಎಂಬ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿ ಮಾಡಿತ್ತು.ಅಕ್ರಮವಾಗಿ ಕಾಮಗಾರಿ ನಡೆಸುತ್ತಿರುವ ಬಹುಮಹಡಿ ಕಟ್ಟಡದ ಪರವಾನಿಗೆ ಯನ್ನು ರದ್ದುಗೊಳಿಸಬೇಕು ಹಾಗೂ ರಸ್ತೆ ಸರಿಪಡಿಸಿ ಕೊಡಲು ಗುತ್ತಿಗೆದಾರರಿಗೆ ಸೂಚನೆ ನೀಡಬೇಕು ಎಂದು ನಗರಪಂಚಾಯತ್ ಮುಖ್ಯಾಧಿಕಾರಿಯನ್ನು ಸ್ಥಳೀಯರು ಒತ್ತಾಯಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

14/10/2021 09:58 pm

Cinque Terre

12.49 K

Cinque Terre

0

ಸಂಬಂಧಿತ ಸುದ್ದಿ