ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುಂಜಾಲಕಟ್ಟೆ: ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಹೆಡ್ ಕಾನ್ ಸ್ಟೇಬಲ್ ಅಬೂಬಕ್ಕರ್ ಸಾವು

ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಬಳಿಯ ನೇರಳಕಟ್ಟೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಪುಂಜಾಲಕಟ್ಟೆ ಠಾಣೆಯ ಹೆಡ್ ಕಾನ್ ಸ್ಟೇಬಲ್, ಮೂಲತಃ ವೇಣೂರಿನ ಮರೋಡಿ ನಿವಾಸಿ ಅಬೂಬಕ್ಕರ್ (48) ಮೃತಪಟ್ಟವರು.

ವಾಮದಪದವಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ವೇಳೆ ನೇರಳಕಟ್ಟೆ ಬಳಿ ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಕೂಡ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುಂಜಾಲಕಟ್ಟೆಯ ಸಹದ್ಯೋಗಿ ಸಿಬ್ಬಂದಿಯೊಂದಿಗೆ ವಾಮದಪದವಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಅಬೂಬಕ್ಕರ್ ತನ್ನ ಬೈಕಿನಲ್ಲಿ ವಾಪಸಾಗುತ್ತಿದ್ದರೆ ಉಳಿದವರು ಇಲಾಖೆ ಜೀಪಿನಲ್ಲಿ ಆಗಮಿಸುತ್ತಿದ್ದರು. ನೇರಳಕಟ್ಟೆ ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,

ಈ ಸಂದರ್ಭ ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೊಲೀಸ್ ಸಿಬ್ಬಂದಿ ಗಾಯಾಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅಬೂಬಕ್ಕರ್ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಈ ಮೊದಲು ಚಿಂತಾಜನಕ ಸ್ಥಿತಿಯಲ್ಲಿದ್ದ ಆಬೂಬಕ್ಕರ್ ಅವರನ್ನು ಪ್ರಥಮ ಚಿಕಿತ್ಸೆಗಾಗಿ ಪುಂಜಾಲಕಟ್ಟೆ ಪ್ರಾ. ಆ. ಕೇಂದ್ರಕ್ಕೆ ತರಲಾಯಿತಾದರೂ, ಈ ವೇಳೆ ಅಲ್ಲಿ ವೈದ್ಯರಾಗಲಿ, ಸಿಬ್ಬಂದಿಯಾಗಲಿ ಇರಲಿಲ್ಲ. ಬಳಿಕ ಅದೇ ಜೀಪಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

Edited By : Vijay Kumar
Kshetra Samachara

Kshetra Samachara

15/10/2021 05:58 pm

Cinque Terre

10.17 K

Cinque Terre

2

ಸಂಬಂಧಿತ ಸುದ್ದಿ