ಮಂಗಳೂರು: ಮನೆ, ಮನೆಗೆ ತೆರಳಿ ಹಿಂದೂ ದೇವರ ಬಗ್ಗೆ ಅವಹೇಳನಕಾರಿ ಸಾಹಿತ್ಯವಿರುವ ಪುಸ್ತಕಗಳನ್ನು ಹಂಚುತ್ತಿದ್ದ ಕೇರಳದ ವ್ಯಕ್ತಿಯನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರದ ಪಾಂಡೇಶ್ವರದಲ್ಲಿರುವ ಕೇರಳ ಸಮಾಜ ಶಾಲೆಯ ಬಳಿ ಮನೆ, ಮನೆಗೆ ತೆರಳಿ ಪುಸ್ತಕಗಳನ್ನು ವಿತರಿಸುತ್ತಿದ್ದ ಕೇರಳದ ಕೊಟ್ಟಾಯಂ ನಿವಾಸಿ ರಾಜೇಯನ್ ಬಂಧಿತ ಆರೋಪಿ.
ರಾಜೇಯನ್ ಮನೆ, ಮನೆಗೆ ತೆರಳಿ ಹಿಂದೂ ದೇವರ ಬಗ್ಗೆ ಅವಹೇಳಕಾರಿಯಾಗಿ ಸಾಹಿತ್ಯವಿರುವ ಪುಸ್ತಕಗಳನ್ನು ಹಂಚುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಜರಂಗ ದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪುಸ್ತಕಗಳನ್ನು ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
15/10/2021 06:04 pm