ಪುತ್ತೂರು: ಯುವಕನೇ ಯುವಕನ ಮೇಲೆ ಅನೈಸರ್ಗಿಕವಾಗಿ ಅತ್ಯಾಚಾರ ಎಸಗಿದ ಘಟನೆ ಇತ್ತೀಚೆಗೆ ಚಿಕ್ಕೋಡಿಯಲ್ಲಿ ನಡೆದಿತ್ತು. ಈ ಘಟನೆ ಮರೆಯುವ ಮುನ್ನವೇ ಅಂತದ್ದೇ ಇನ್ನೊಂದು ಘಟನೆ ಪುತ್ತೂರಿನಲ್ಲಿ ನಡೆದಿದೆ. ಎಂಡೋಸಲ್ಫಾನ್ ಸಂತ್ರಸ್ತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುರ ಎಂಬಲ್ಲಿ ಬೆಳಕಿಗೆ ಬಂದಿದೆ!
ಈ ಸಂಬಂಧ ಸಂತ್ರಸ್ತನ ಕುಟುಂಬ ನೀಡಿದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣೆ ಪೊಲೀಸರು ಮುರ ನಿವಾಸಿ ಮಹಮ್ಮದ್ ಹನೀಫ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
Kshetra Samachara
16/10/2021 02:10 pm