ಪುತ್ತೂರು: ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್ (84) ಮತ್ತು ಶಾರದಾ (76) ಆತ್ಮಹತ್ಯೆ ಮಾಡಿಕೊಂಡವರು.
ಮನೆ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಹೊಸ ಬಟ್ಟೆ ಧರಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
18/10/2021 12:26 pm