ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಾಡ್ಜ್ ನಲ್ಲಿ ಸ್ನೇಹಿತನ ಹತ್ಯೆ ಪ್ರಕರಣ; ಐವರು ಆರೋಪಿಗಳ ಬಂಧನ

ಮಂಗಳೂರು: ಲಾಡ್ಜ್ ನಲ್ಲಿ ಪಾರ್ಟಿ ನಡೆಸುತ್ತಿದ್ದ ಸಂದರ್ಭ ಮಾತಿಗೆ ಮಾತು ಬೆಳೆದು ಓರ್ವನ ಹತ್ಯೆಯೊಂದಿಗೆ ಅಂತ್ಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್ ನಿವಾಸಿ ಜೋಯ್ಸನ್(21), ನಂದಿಗುಡ್ಡ ನಿವಾಸಿ ಪ್ರಮೀತ್(24), ವಾಮಂಜೂರು ನಿವಾಸಿ ಕಾರ್ತಿಕ್(21), ಪಚ್ಚನಾಡಿ ನಿವಾಸಿಗಳಾದ ಪ್ರಜ್ವಲ್(22), ದುರ್ಗೇಶ್(22) ಬಂಧಿತರು. ಮೃತ ಧನುಷ್ ಗೆ ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡುವ ಚಾಳಿಯಿದ್ದು, ಈ ಬಗ್ಗೆ ಆತನಿಗೆ ತಿಳಿ ಹೇಳಬೇಕೆಂದು ಸ್ನೇಹಿತರು ಸೇರಿ ಪಾರ್ಟಿ ಆಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಅ.15 ರಂದು ಮಂಗಳೂರಿನ ಪಂಪ್ ವೆಲ್ ಬಳಿಯ ಸಾಯಿ ಪ್ಯಾಲೇಸ್ ಲಾಡ್ಜ್ ನಲ್ಲಿ ರೂಂ ಮಾಡಿ ಪಾರ್ಟಿ ಆಯೋಜಿಸಿದ್ದರು.

ಪಾರ್ಟಿಯ ವೇಳೆ ಈ ವಿಚಾರವನ್ನು ಸ್ನೇಹಿತರು ಧನುಷ್ ಗೆ ತಿಳಿಸಿದ್ದಾರೆ. ಆದರೆ, ಆತ ಉಡಾಫೆಯಿಂದ ಮಾತನಾಡಿದ್ದಾನೆ. ಈ ಸಂದರ್ಭ ಸ್ನೇಹಿತರ ಮಧ್ಯೆ ವಾಗ್ವಾದ ನಡೆದು ಹೊಡೆದಾಟ ನಡೆದಿದೆ. ಆಗ ಜೋಯ್ಸನ್ ತನ್ನ ಬಳಿಯಿದ್ದ ಬಟನ್ ಚಾಕುವಿನಿಂದ ಧನುಷ್ ಎದೆಗೆ ಇರಿದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವನ ಬಂಧನ ಆಗಬೇಕಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

18/10/2021 02:35 pm

Cinque Terre

12.94 K

Cinque Terre

0

ಸಂಬಂಧಿತ ಸುದ್ದಿ