ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಸಾಲೂರಿನಲ್ಲಿ ಅಕ್ರಮ ಗಣಿಗಾರಿಕೆ ಅವ್ಯಾಹತ; ಸರಕಾರದ ಚಿತ್ತ ಹರಿಯುವುದೇ ಇತ್ತ...

ಬೈಂದೂರು: ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವುದು ಅಕ್ರಮ ಗಣಿಗಾರಿಕೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಪಂ ವ್ಯಾಪ್ತಿಯ ಸಾಲೂರಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಇದಕ್ಕೊಂದು ತಾಜಾ ಉದಾಹರಣೆ.

ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಸ್ಫೋಟಕಗಳನ್ನು ಬಳಸಿದ್ದರಿಂದ ದುರಂತ ಸಂಭವಿಸಿದ್ದನ್ನು ಇನ್ನೂ ಜನ ಮರೆತಿಲ್ಲ. ಈಗ ಮಲೆನಾಡ ಬುಡದಲ್ಲೇ ರಾಜಾರೋಷವಾಗಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದೆ.ಸ್ಫೋಟಕ ಬಳಸಿ ಇಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂಬುದು ಸ್ಥಳೀಯರ ಆರೋಪ.

ಸಾಲೂರಿನಲ್ಲಿ ಶಿಲೆಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇದರಲ್ಲಿ ಸ್ಥಳೀಯ ರಾಜಕಾರಣಿಗಳ ಕೈವಾಡವಿದೆ ಎನ್ನಲಾಗಿದೆ. ಇದು ಸಂಪೂರ್ಣ ಅರಣ್ಯ ಭೂಮಿಯಾಗಿದ್ದು, ಈ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಹಲವು ವರ್ಷಗಳಿಂದಲೂ ನಡೆಯುತ್ತಿರುವುದರಿಂದ ಜನರಿಗೆ ತೊಂದರೆ ಜತೆಗೆ ವನ ಸಂಪತ್ತು ಲೂಟಿ, ಕಾಡುಪ್ರಾಣಿಗಳ ಪ್ರಾಣಕ್ಕೂ ಸಂಚಕಾರ ಉಂಟಾಗುತ್ತಿದೆ. ಸರಕಾರದ ಚಿತ್ತ, ಇತ್ತ ಕಡೆ ಇನ್ನಾದರೂ ಹರಿಯ ಬೇಕಿದೆ.

Edited By : Manjunath H D
Kshetra Samachara

Kshetra Samachara

18/10/2021 03:54 pm

Cinque Terre

11.09 K

Cinque Terre

0