ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ವಕೀಲ, ಲೋಕಾಯುಕ್ತ ಮತ್ತು ಎಸಿಬಿ ಸ್ಪೆಷಲ್ ಪಿಪಿ, ಕೆ.ಎಸ್.ಎನ್ ರಾಜೇಶ್ ಭಟ್ (47) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜೇಶ್ ಭಟ್ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡಲು ಬಂದಿದ್ದ ಉತ್ತರ ಭಾರತ ಮೂಲದ ವಿದ್ಯಾರ್ಥಿನಿ ದೂರು ದಾಖಲಿಸಿದ್ದಾಳೆ. ರಾಜೇಶ್ ತನ್ನ ಕಚೇರಿಯಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು ಖಾಸಗಿ ಅಂಗಗಳನ್ನು ಮುಟ್ಟುತ್ತಿದ್ದರು ಎಂದು ಆರೋಪಿಸಲಾಗಿದೆ.
12 ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ಕಾನೂನು ಸಲಹೆಗಾರ ಆಗಿರುವ ರಾಜೇಶ್ ಭಟ್ ಮೇಲೆ ಇದೀಗ ತನಿಖೆ ಕೈಗೊಳ್ಳಲಾಗುತ್ತಿದೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣದ ಕುರಿತು ಎಫ್ಐಆರ್ ದಾಖಲಾಗುತ್ತಿದೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ತಲೆಮರೆಸಿಕೊಂಡಿದ್ದಾರೆ.
Kshetra Samachara
19/10/2021 09:53 am