ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಘಟನೆ ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯ ಉಚ್ಚಿಲ ಪೆರಿಂಬೈಲ್ ಎಂಬಲ್ಲಿ ನಡೆದಿದೆ. ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದ ಪೊಲೀಸ್ ತಂಡವು ಎರಡು ಲಾರಿ, ಮೂರು ದ್ವಿಚಕ್ರ ವಾಹನ ಸೇರಿದಂತೆ ಅಪಾರ ಪ್ರಮಾಣದ ಅಕ್ರಮ ಮರಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದೆ.
ಕಲ್ಲಾಪು ನಿವಾಸಿ ಮಯ್ಯದ್ದಿ, ತಲಪಾಡಿ ನಿವಾಸಿ ಒಸ್ವಾಲ್ ಡಿಸೋಜ ಬಂಧಿತರು. ಈ ಪ್ರದೇಶದಲ್ಲಿ ತಡರಾತ್ರಿ ವೇಳೆ ಅಕ್ರಮ ಮರಳು ಸಾಗಾಟ ವ್ಯಾಪಕಗೊಂಡ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ವತಃ ಡಿಸಿಪಿ ಅವರೇ ಸ್ಥಳೀಯ ಪೊಲೀಸರ ನೆರವಿನಲ್ಲಿ ಅಕ್ರಮ ಮರಳು ಅಡ್ಡೆಗೆ ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.
Kshetra Samachara
20/10/2021 03:48 pm