ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕ ಶವವಾಗಿ ಪತ್ತೆಯಾದ ಘಟನೆ ಇಂದು ಕಾಸರಗೋಡು ಜಿಲ್ಲೆಯ ಬದಿಯಡ್ಕ ಠಾಣಾ ವ್ಯಾಪ್ತಿಯ ಮುಂಡ್ಯತ್ತಡ್ಕ ಬೆಳಕಿಗೆ ಬಂದಿದೆ.

ಮುಂಡ್ಯತ್ತಡ್ಕದ ಜನಾರ್ದನ ಮೃತಪಟ್ಟವರು. ಸೋಮವಾರ ಸಂಜೆ ಮನೆಗೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ಜನಾರ್ದನ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ಕಾರ್ಯ ನಡೆಸಿದ್ದರು. ಇಂದು ಬೆಳಗ್ಗೆ ಮನೆಯಿಂದ ಅಲ್ಪ ದೂರದ ಗೇರು ಮರದ ರೆಂಬೆಗೆ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಜನಾರ್ದನರ ಮೃತದೇಹ ಪತ್ತೆಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಬದಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

20/10/2021 03:53 pm

Cinque Terre

9.04 K

Cinque Terre

0

ಸಂಬಂಧಿತ ಸುದ್ದಿ