ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವಕೀಲ ರಾಜೇಶ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್- ಪಿಎಸ್‌ಐ ಎಚ್.ಸಿ ಅಮಾನತು

ಮಂಗಳೂರು: ವಕೀಲ ಕೆ.ಎಸ್‌.ಎನ್‌. ರಾಜೇಶ್ ಭಟ್‌ನಿಂದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕರ್ತವ್ಯ ಲೋಪದ ಅಡಿಯಲ್ಲಿ ಪಿಎಸ್‌ಐ ಮತ್ತು ಹೆಡ್ ಕಾನ್‌ಸ್ಟೇಬಲ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಉರ್ವ ಪೊಲೀಸ್ ಠಾಣೆಯ ಪಿಎಸ್‌ ಐ ಶ್ರೀಕಲಾ, ಎಚ್ ಸಿ ಪ್ರಮೋದ್ ಅಮಾನತುಗೊಂಡವರು. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಅಮಾನತು ಆದೇಶ ಹೊರಡಿಸಿದ್ದಾರೆ. ಇವರು ಕಾನೂನು ಬಾಹಿರವಾಗಿ ಸಂತ್ರಸ್ತ ಯುವತಿಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಂಡಿದ್ದರು ಎನ್ನಲಾಗಿದೆ.

Edited By : Vijay Kumar
Kshetra Samachara

Kshetra Samachara

22/10/2021 02:38 pm

Cinque Terre

12.73 K

Cinque Terre

3