ಮಂಗಳೂರು: ಮಂಗಳೂರಿನ ಎಂ.ಜಿ. ರೋಡ್ ನಲ್ಲಿರುವ ಆನೆಕ್ಸ್ ಪಬ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ.
ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
ಅಬಕಾರಿ ಕಾಯ್ದೆ, ಕೆ.ಪಿ. ಆ್ಯಕ್ಟ್ ಮತ್ತು ಎಪಿಡೆಮಿಕ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪಬ್ ನಿಗದಿತ ಸಮಯಕ್ಕಿಂತ ಹೆಚ್ಚು ಹೊತ್ತು ಓಪನ್ ಇದ್ದು, ಜೋರಾದ ಧ್ವನಿವರ್ಧಕಗಳನ್ನು ಬಳಸಿ ಅಕ್ಕಪಕ್ಕದವರಿಗೆ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು.
ಪಬ್ ನಿಂದ ಹೊರ ಬರುವವರು ಅಶ್ಲೀಲವಾಗಿ ವರ್ತಿಸುತ್ತಿದ್ದರು ಎಂಬುದಾಗಿ ಸಾರ್ವಜನಿಕರು ದೂರು ನೀಡಿದ್ದರು.ದಾಳಿ ವೇಳೆ ಧ್ವನಿವರ್ಧಕಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
Kshetra Samachara
24/10/2021 08:50 am