ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮನೆಯಿಂದ ನಾಪತ್ತೆಯಾದ ಬಾಲಕಿ ಮೃತದೇಹ ನದಿಯಲ್ಲಿ ಪತ್ತೆ

ಮಂಗಳೂರು: ಇಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ 11ರ ಬಾಲಕಿ ಮೃತದೇಹ ನದಿಯಲ್ಲಿ ಪತ್ತೆಯಾರುವ ಘಟನೆ ನಗರದ ಕುದ್ರೋಳಿಯಲ್ಲಿ‌ ನಡೆದಿದೆ.

ಕುದ್ರೋಳಿ ಹೈದರಾಲಿ ರೋಡ್ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತಪಟ್ಟ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದಳು. ತಕ್ಷಣ ಮನೆಮಂದಿ ಎಲ್ಲಾ ಕಡೆ ಹುಡುಕಾಡಿದ್ದಾರೆ‌. ಆದರೆ ಆಕೆ ಪತ್ತೆಯಾಗಿರಲಿಲ್ಲ. ಸಿಸಿಟಿವಿಯನ್ನು ಪರಿಶೀಲನೆ ನಡೆಸಿದಾಗ ಆಕೆ ಮನೆಯ ಸಮೀಪದಲ್ಲಿರುವ ನದಿ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನದಿಯಲ್ಲಿ ಶೋಧ ನಡೆಸಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ.

ಮೃತ ಮುಫೀದಾ ವಿಶೇಷ ಚೇತನಳಾಗಿದ್ದು, ಈಕೆ ಮನೆಮಂದಿಯ ಗಮನಕ್ಕೆ ಬಾರದೆ ಹೊರಬಂದಿದ್ದಾಳೆ ಎನ್ನಲಾಗಿದೆ. ತಕ್ಷಣ ಸ್ಥಳಕ್ಕೆ ಬಂದರು ಠಾಣೆಯ ಪೊಲೀಸರು ಧಾವಿಸಿ ಆಕೆಯ ಮೃತದೇಹವನ್ನು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆದ ಬಳಿಕ ಪೋಷಕರಿಗೆ ಮೃತದೇಹ ಹಸ್ತಾಂತರ ಮಾಡಲಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

24/10/2021 06:58 pm

Cinque Terre

14.29 K

Cinque Terre

0

ಸಂಬಂಧಿತ ಸುದ್ದಿ