ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಣಿಕೆಗೆ ಕೊರಳೊಡ್ಡಿದ ಎಸ್ಎಸ್ಎಲ್ ಸಿ ವಿದ್ಯಾರ್ಥಿ: ಕಾರಣ ನಿಗೂಢ

ಮಂಗಳೂರು: ನಗರದ ಜೆಪ್ಪು ಕುಡುಪಾಡಿಯ ನಿವಾಸಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೋರ್ವ ನಿನ್ನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜೆಪ್ಪು ಕುಡುಪಾಡಿ ನಿವಾಸಿ ಅನೀಶ್ ಪಿ.ಪಾಯಲ್ (16) ಮೃತ ಎಸ್ಎಸ್ಎಲ್ ಸಿ ವಿದ್ಯಾರ್ಥಿ. ಜೆಪ್ಪು ಕುಡುಪಾಡಿಯ ದಿ.ಪ್ರಶಾಂತ್ ಪಾಯಲ್ ಎಂಬವರ ಪುತ್ರನಾದ ಅನೀಶ್ ಎಂಬ ಎಸ್ಎಸ್ಎಲ್ ಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿರುವುದಾಗಿ ಇನ್ನೂ ತಿಳಿದು ಬಂದಿಲ್ಲ. ಯಾವುದೋ ಕಾರಣದಿಂದ ಮನನೊಂದು ಈ ಕೃತ್ಯ ಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಅನೀಶ್ ತಂದೆ ಪ್ರಶಾಂತ್ ಪಾಯಲ್ ಅವರು ಮೂರು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಬಳಿಕದಿಂದ ಅನೀಶ್ ಮಾನಸಿಕವಾಗಿ ಕುಗ್ಗಿದ್ದ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

25/10/2021 12:01 pm

Cinque Terre

15.46 K

Cinque Terre

0

ಸಂಬಂಧಿತ ಸುದ್ದಿ