ಮುಲ್ಕಿ: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈಕಂಪಾಡಿ ಎಪಿಎಂಸಿ ಯಾರ್ಡ್ ಬಳಿ ಕಾರ್ಯಾಚರಿಸುತ್ತಿರುವ ಮೊಬೈಲ್ ಅಂಗಡಿ ಮಾಲೀಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗ್ರಾಮದ ಗೋಳಿಜೋರ ನಿವಾಸಿ ಇಬ್ರಾಹಿಂ (32) ಎಂದು ಗುರುತಿಸಲಾಗಿದೆ.
ಆರೋಪಿ ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದು ಕಳೆದ ಒಂದು ವರ್ಷದಿಂದ ತನ್ನ ಅಂಗಡಿಗೆ ಮೊಬೈಲ್ ರಿಚಾರ್ಜ್ ಮಾಡಲೆಂದು ಬರುತ್ತಿದ್ದ ಶಿಬರೂರು ಮೂಲದ ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಯುವತಿ ಆರೋಪಿಸಿ ನ್ಯಾಯಕ್ಕಾಗಿ ಹಿಂದೂ ಸಂಘಟನೆಗಳಿಗೆ ಮನವಿ ಸಲ್ಲಿಸಿದ್ದರು.
ಅದರಂತೆ ಕಾರ್ಯಾಚರಣೆ ನಡೆಸಿದ ಸುರತ್ಕಲ್ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡದ ಉಪಾಧ್ಯಕ್ಷ ಸತೀಶ್ ಆಚಾರ್ಯ, ಕಾರ್ಯದರ್ಶಿ ಜಯರಾಮ್ ಆಚಾರ್ಯ, ಬಜರಂಗದಳ ಸುರತ್ಕಲ್ ಪ್ರಖಂಡ ಸಂಯೋಜಕ್ ಆಶಿತ್ ಶೆಟ್ಟಿ ಹಾಗೂ ಪ್ರಮುಖರಾದ ವೈಶಾಕ್ ಕುಳಾಯಿ, ದಯಾನಂದ್ ಆಚಾರ್ಯ, ಅರುಣ್ ಶೆಟ್ಟಿ ಕುಳಾಯಿ ನೇತೃತ್ವದಲ್ಲಿ, ಮುಲ್ಕಿ ಪ್ರಖಂಡ ಹಾಗೂ ರಾಮ ಸೇನೆಯ ಕಾರ್ಯಕರ್ತರ ಸಹಕಾರದೊಂದಿಗೆ ಯುವತಿ ನೀಡಿದ ದೂರಿನಂತೆ ಸುರತ್ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಸ್ಕೋ ಪ್ರಕರಣ ದಾಖಲಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kshetra Samachara
26/10/2021 11:37 am