ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ; 11 ದೋಣಿಗಳು ವಶಕ್ಕೆ

ಮಂಗಳೂರು: ನಗರದ ಫೈಸಲ್ ನಗರ ಬಳಿಯ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದೆಯೆನ್ನಲಾದ 11 ದೋಣಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಫೈಸಲ್ ನಗರ ಬಳಿಯ ನದಿಯಲ್ಲಿ ರಾತ್ರಿ ಹೊತ್ತು ಅಕ್ರಮವಾಗಿ ದೋಣಿಗಳಲ್ಲಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಈ ದಾಳಿ ನಡೆಸಲಾಗಿದೆ. ಪೊಲೀಸರು ಅಕ್ರಮವಾಗಿ ಮರಳುಗಾರಿಕೆಯಲ್ಲಿ ತೊಡಗಿದ್ದ 11 ದೋಣಿಗಳನ್ನು ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

28/10/2021 05:59 pm

Cinque Terre

11.94 K

Cinque Terre

0

ಸಂಬಂಧಿತ ಸುದ್ದಿ