ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿದ್ಯಾನಗರಿಯಲ್ಲಿ ಮತ್ತೆ ರೇಪ್ ಸದ್ದು!

ವರದಿ: ರಹೀಂ ಉಜಿರೆ

ಮಣಿಪಾಲ: ಎಂಟು ವರ್ಷಗಳ ಬಳಿಕ ವಿದ್ಯಾನಗರಿ ಮಣಿಪಾಲ ಮತ್ತೊಮ್ಮೆ ಸುದ್ದಿಯಲ್ಲಿದೆ.ಆಗ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದ್ದರೆ ಈಗ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ರೇಪಾಗಿದೆ.ಈ ಅತ್ಯಾಚಾರದ ಆರೋಪಿ ಬೇರಾರೂ ಅಲ್ಲ ,ಸ್ವತಃ ಸ್ನೇಹಿತನೇ!

ಈ ಪ್ರಕರಣದಲ್ಲಿ ಆರೋಪಿ ಬೇರೆ ಯಾರೂ ಅಲ್ಲ, ಸಂತ್ರಸ್ತ ಯುವತಿಯ ಗೆಳೆಯನೇ ಇಲ್ಲಿ ಅತ್ಯಾಚಾರ ಮಾಡಿದ್ದಾನೆ. ಒತ್ತಾಯಪೂರ್ವಕವಾಗಿ ಊಟಕ್ಕೆಂದು ಯುವತಿಯನ್ನು ಬರ ಹೇಳಿದ್ದಾನೆ. ಮಣಿಪಾಲದ ಹೋಟೆಲೊಂದರಲ್ಲಿ ಇಬ್ಬರೂ ಊಟ ಮಾಡಿದ್ದಾರೆ. ಈ ವೇಳೆ ಆತ ಆಕೆಗೆ ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿದ್ದಾನೆ. ಬಳಿಕ ಹಾಸ್ಟೆಲಿಗೆ ಬಿಡುವ ನೆಪಮಾಡಿ, ಲಾಡ್ಜಿಗೆ ಕರೆದೊಯ್ದಿದ್ದಾನೆ. ಆಕೆ ಮೇಲೆ ಅತ್ಯಾಚಾರ ಮಾಡಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸುವ ಸಂದರ್ಭ ಎದುರಾಗುತ್ತದೆ. ಇದರಿಂದಾಗಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ದೆಹಲಿ ಮೂಲದ ಆರೋಪಿ ಆರ್ಯನ್ ಚಂದವಾನಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ . ಸದ್ಯ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆದರೆ ಈ ಪ್ರಕರಣದಲ್ಲಿ ಈತನನ್ನು ಹೊರತುಪಡಿಸಿ ಇನ್ನೂ ಕೆಲವು ವಿದ್ಯಾರ್ಥಿಗಳು ಇದ್ದಾರೆ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ ...

ಅತ್ಯಾಚಾರ ಪ್ರಕರಣದಲ್ಲಿ ಒಬ್ಬನೇ ಆರೋಪಿ ಇದ್ದನೋ ಅಥವಾ ಇನ್ನಷ್ಟು ಆರೋಪಿಗಳು ಭಾಗಿಯಾಗಿದ್ದಾರೋ ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮಣಿಪಾಲದಲ್ಲಿ ಅನೇಕ ಬಾರಿ ಇಂತಹ ಪ್ರಕರಣಗಳು ಮುಚ್ಚಿಹೋಗಿರುವ ಬಗ್ಗೆಯೂ ಸಾರ್ವಜನಿಕ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.

Edited By : Nagesh Gaonkar
Kshetra Samachara

Kshetra Samachara

28/10/2021 06:59 pm

Cinque Terre

18.05 K

Cinque Terre

5

ಸಂಬಂಧಿತ ಸುದ್ದಿ