ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಮೂವರು ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡ ಬೋವಿ ಸಮಾಜದ ಮೂವರು ಮಹಿಳೆಯರು ಆಸ್ಪತ್ರೆಗೆ ದಾಖಲಾದ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿರುವ ಪರಿಶಿಷ್ಟ ಕಾಲೋನಿಯಲ್ಲಿ ನಡೆದಿದೆ.
ಸ್ಥಳೀಯ ಗೇರುಬೀಜ ಕಂಪೆನಿಯಿಂದ ಮಹಿಳೆಯರು ಕೆಲಸ ಮುಗಿಸಿ ಮರಳುತ್ತಿದ್ದಾಗ ಆರೋಪಿ ಮಹಮ್ಮದ್ ಹುಸೇನ್ ಕತ್ತಿಯಿಂದ ಕಡಿದು ಹಲ್ಲೆಗೈದಿದ್ದಾನೆ ಎಂದು ದೂರಲಾಗಿದೆ. ಈ ಪೈಕಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರಿಗೆ ಕೈ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರೋಪಿಯನ್ನು ಬಂಧಿಸಿರುವ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
29/10/2021 06:42 pm