ಮಂಗಳೂರು: ಮಂಗಳೂರಿನ ಏರ್ ಪೋರ್ಟ್ ನಲ್ಲಿ ದೇಹದೊಳಗೆ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಸೊತ್ತು ವಶಪಡಿಸಿಕೊಂಡಿದ್ದಾರೆ.
ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಆರೋಪಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆಗ ಈತ ದೇಹದೊಳಗೆ ಬಿಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಪಾಸಣೆ ವೇಳೆ ಆರೋಪಿಯ ಬಳಿ 663 ಗ್ರಾಂ ತೂಕದ 32,55,330 ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನ ಇರುವುದು ಪತ್ತೆಯಾಗಿದೆ. ತಕ್ಷಣ ಚಿನ್ನವನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
Kshetra Samachara
30/10/2021 01:36 pm