ಬಂಟ್ವಾಳ: ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರಾವ್ಯ (20) ಆತ್ಮಹತ್ಯೆ ಮಾಡಿಕೊಂಡವರು.
ಅ. 29ರಂದು ಮಧ್ಯಾಹ್ನ ತನ್ನೂರು ಪೆರ್ಲ ಸಮೀಪದ ಬಜಕೂಡ್ಲಿನಲ್ಲಿರುವ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಂದೆ, ತಾಯಿ, ಇಬ್ಬರು ಸಹೋದರಿಯರನ್ನು ಶ್ರಾವ್ಯ ಅಗಲಿದ್ದಾರೆ. ಪೆರ್ಲ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Kshetra Samachara
30/10/2021 08:43 pm