ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರಿಂಜ ಕ್ಷೇತ್ರ ಪಾವಿತ್ರ್ಯತೆಗೆ ಧಕ್ಕೆ: ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ಜಿಲ್ಲೆಯ ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರಗಳಲ್ಲೊಂದಾದ ಮಹಾತೋಭಾರ ಶ್ರೀ ಕಾರಿಂಜ ಕ್ಷೇತ್ರದ ಶಿವನ ಸಾನಿಧ್ಯಕ್ಕೆ ಯುವಕರ ತಂಡ ಪಾದರಕ್ಷೆ ಧರಿಸಿ ಒಳ ಪ್ರವೇಶಿಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಈ ವರ್ತನೆಗೆ ಭಕ್ತಾದಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ವಿಷಯ ತಿಳಿದ ತಕ್ಷಣ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉನ್ನತ ಪೋಲಿಸ್ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆಯ ಬಗ್ಗೆ ತಿಳಿಸಿ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ರೀತಿಯ ಘಟನೆಗಳು ಇತ್ತೀಚೆಗಿನ ದಿನಗಳಲ್ಲಿ ಅಲ್ಲಲ್ಲಿ ನಡೆಯುತ್ತಿದ್ದು ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಂಟ್ವಾಳದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸಿದ ದುಷ್ಕರ್ಮಿಗಳನ್ನು ಮಟ್ಟ ಹಾಕಲು ಕಾನೂನು ರಿತ್ಯ ಕ್ರಮ ಪೋಲಿಸ್ ಇಲಾಖೆ ಕೈಗೊಳ್ಳಲು ಸೂಚಿಸಿದ್ದಾರೆ.

ಐದು ಮಂದಿ ಯುವಕರ ತಂಡ ಮೋಜು ಮಸ್ತಿ ಮಾಡಲು ಕಾರಿನಲ್ಲಿ ಕಾರಿಂಜ ಕ್ಷೇತ್ರಕ್ಕೆ ಆಗಮಿಸಿದ್ದು ಈ ಸಂದರ್ಭ ಪಾದರಕ್ಷೆ ಧರಿಸಿಕೊಂಡೇ ದೇವಸ್ಥಾನದ ಒಳಾಂಗಣ ಪ್ರವೇಶಿಸಿರುವುದಲ್ಲದೇ, ಅಲ್ಲಿ ಮೋಜು ಮಸ್ತಿ ಮಾಡಿರುವ ದೃಶ್ಯ ವಿಡಿಯೋದಲ್ಲಿ ಕಂಡು ಬಂದಿದೆ. ದೇವಸ್ಥಾನವನ್ನು ಅಪವಿತ್ರಗೊಳಿಸಿರುವ ಈ ಯುವಕರ ವಿರುದ್ಧ ಕಾನೂನು ಕ್ರಮ ಜರುಗಿಸಬೆಕೆಂದು ಹಿಂದು ಸಂಘಟನೆಗಳು ಒತ್ತಾಯಿಸಿವೆ. ಈ ವಿಡಿಯೋ ಯಾವಾಗ ಚಿತ್ರೀಕರಣವಾಗಿದ್ದು ಎಂಬ ಕುರಿತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.

Edited By : Nagaraj Tulugeri
Kshetra Samachara

Kshetra Samachara

03/11/2021 09:34 am

Cinque Terre

11.69 K

Cinque Terre

0

ಸಂಬಂಧಿತ ಸುದ್ದಿ