ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಕಾರಿಂಜ ದೇವಸ್ಥಾನ ಅಪವಿತ್ರಗೊಳಿಸಿದ ಪ್ರಕರಣ; ನಾಲ್ವರು ಪೊಲೀಸ್ ವಶಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಕ್ಷೇತ್ರ ಕಾರಿಂಜ ಪರ್ವತದ ಮೇಲಿರುವ ಶ್ರೀ ಕಾರಿಂಜೇಶ್ವರ ದೇವಸ್ಥಾನವನ್ನು ಅಪವಿತ್ರಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ. ಸೌಮ್ಯಾ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಕಿಡಿಗೇಡಿಗಳು ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಚಪ್ಪಲಿ ಧರಿಸಿಕೊಂಡು, ಪ್ರವೇಶ ಮಾಡಿ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟು ಮಾಡಿ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿರುವ ವೀಡಿಯೋವನ್ನು ಹರಿಯಬಿಟ್ಟಿದ್ದಾರೆ. ಅ. 10ರಂದು ಈ ವೀಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಆರೋಪಿಗಳು, ದೇವಸ್ಥಾನ ಪೂಜಾ ಸ್ಥಳವೆಂದು ಗೊತ್ತಿದ್ದರೂ ದೇವಸ್ಥಾನಕ್ಕೆ ಚಪ್ಪಲಿ, ಶೂ ಧರಿಸಿಕೊಂಡು ಪ್ರವೇಶ ಮಾಡಿ ಅಪವಿತ್ರಗೊಳಿಸಿದ್ದು, ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

03/11/2021 10:31 pm

Cinque Terre

24.78 K

Cinque Terre

1

ಸಂಬಂಧಿತ ಸುದ್ದಿ