ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ನಾಪತ್ತೆಯಾಗಿದ್ದ ವಿವಾಹಿತೆ ಯುವಕನೊಂದಿಗೆ ಪತ್ತೆ

ಮೂಡುಬಿದಿರೆ: ಮೂರು ದಿನಗಳ ಹಿಂದೆ ವಿವಾಹಿತ ಮಹಿಳೆಯೊಬ್ಬಳು ಯುವಕನೊಂದಿಗೆ ನಾಪತ್ತೆಯಾಗಿದ್ದು, ಮೂಡುಬಿದಿರೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಕಳ ತಾಲೂಕಿನ ಶಿರ್ಲಾಲಿನ ವಿವಾಹಿತೆ, ಎರಡು ಮಕ್ಕಳ ತಾಯಿ ಮೂರು ದಿನಗಳ ಹಿಂದೆ ಮೂಡುಬಿದಿರೆ ತಾಲೂಕಿನ ಬೆಳುವಾಯಿಯಲ್ಲಿರುವ ತಮ್ಮ ಮನೆಗೆ ಬಂದಿದ್ದು, ಈ ವೇಳೆ ಶಿರ್ಲಾಲಿನ ಸಂದೀಪ್ ಆಚಾರ್ಯ ಎಂಬಾತನೊಂದಿಗೆ ಪರಾರಿಯಾಗಿದ್ದಳು ಎನ್ನಲಾಗಿದೆ. ಇಬ್ಬರನ್ನು ಪತ್ತೆ ಹಚ್ಚಿರುವ ಪೊಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಂಡನ ಮನೆಗೆ ಹೋಗಲು ಒಪ್ಪದ ಮಹಿಳೆಯನ್ನು ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ ಸೇರಿಸಲಾಗಿದೆ.

Edited By : Vijay Kumar
Kshetra Samachara

Kshetra Samachara

04/11/2021 01:51 pm

Cinque Terre

15.01 K

Cinque Terre

1

ಸಂಬಂಧಿತ ಸುದ್ದಿ