ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಬ್ರಹ್ಮಣ್ಯ: ಅಡಿಕೆ ಕದ್ದನೆಂದು ಬಾಲಕನಿಗೆ ಮಾರಣಾಂತಿಕ ಹಲ್ಲೆ; ಆರೋಪಿಗಳು ಎಸ್ಕೇಪ್

ಸುಬ್ರಹ್ಮಣ್ಯ: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು, ಹಲ್ಲೆ ನಡೆಸಿದ 10 ಮಂದಿ ಮೇಲೆ ಎಫ್ ಐಆರ್ ದಾಖಲಾಗಿದೆ.

ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಮಾತ್ರವಲ್ಲದೆ, ಹಲ್ಲೆ ನಡೆಸಿದ ವೀಡಿಯೋ ಕೂಡ ಗ್ರೂಪ್‌ಗಳಲ್ಲಿ ಹರಿಯಬಿಡಲಾಗಿತ್ತು,ಇದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ.

ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಕೇಸು ದಾಖಲಾಗಿದ್ದು, ವೀಡಿಯೋ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಹಲ್ಲೆಕೋರರು ನಾಪತ್ತೆಯಾಗಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

04/11/2021 10:45 pm

Cinque Terre

31.68 K

Cinque Terre

5

ಸಂಬಂಧಿತ ಸುದ್ದಿ